ಧಾರಾಕಾರ ಮಳೆ ; ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಶಾಲಾ, ಕಾಲೇಜುಗಳಿಗೆ ರಜೆ…

76
firstsuddi

ಮಂಗಳೂರು/ಕಾರವಾರ/ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಡಿಗ್ರಿ ಕಾಲೇಜ್ ನ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಿಳಿಸಿದರು.

ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ, ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಸೂಚನೆಯಂತೆ ಇಂದು ರಜೆ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರಿದರೆ ಮತ್ತೆ ರಜೆ ಮುಂದುವರಿಸುವ ಸೂಚನೆ ನೀಡಿದ್ದಾರೆ.

ಇನ್ನೂ ಉಡುಪಿ ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ ಹಾಗೂ ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದೆ.