ಧಾರಾವಾಹಿ ಶೂಟಿಂಗ್‍ಗಳಿಗೆ ಅವಕಾಶ – ನಿಯಮಗಳು ಅನ್ವಯ…

214
firstsuddi

ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಕಳೆದ ಒಂದು ತಿಂಗಳಿನಿಂದ ಇಡೀ ದೇಶವೇ ಲಾಕ್‍ಡೌನ್ ಆಗಿರುವ ಹಿನ್ನೆಲೆ, ಸ್ಥಗಿತಗೊಂಡಿರುವ ಧಾರಾವಾಹಿ ಶೂಟಿಂಗ್‍ಗಳಿಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಕಂದಾಯ ಸಚಿವ ಆರ್.ಅಶೋಕ್ ಅವರು, ಆರು ಸಾವಿರಕ್ಕೂ ಹೆಚ್ಚು ಮಂದಿ ಕಾರ್ಮಿಕರು ಧಾರಾವಾಹಿ ಚಿತ್ರೀಕರಣದ ಮೇಲೆ ಅವಲಂಭಿತರಾಗಿದ್ದು, ಹೀಗಾಗಿ ಸರ್ಕಾರ ಮನೆಯೊಳಗೆ ನಡೆಯುವಂತಹ ಚಿತ್ರೀಕರಣಗಳಿಗೆ ಮಾತ್ರ ಅವಕಾಶ ನೀಡಿದೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚಿತ್ರೀಕರಣ ನಡೆಸಲು ಅವಕಾಶ ನೀಡಲಾಗಿದೆ. ಹಾಗೂ ಹೊರಗೆ ನಡೆಯುವಂತಹ ಶೂಟಿಂಗ್‍ಗಳಿಗೆ, ಸಿನಿಮಾ, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.