ಧೈರ್ಯ ಬಂದರೆ ಎಲ್​​ಕೆಜಿ, ಯುಕೆಜಿ ಆರಂಭ ಮಾಡ್ತೇವೆ : ಸಚಿವ ಬಿ.ಸಿ.ನಾಗೇಶ್.

96
firstsuddi

ಬೆಂಗಳೂರು : ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, 1 ರಿಂದ 5ನೇ ತರಗತಿವರೆಗಿನ ಶಾಲೆ ಆರಂಭ ನೋಡಿಕೊಂಡು, ಧೈರ್ಯ ಬಂದರೆ ಪ್ರೈಮರಿ, ಎಲ್​​ಕೆಜಿ, ಯುಕೆಜಿ ಆರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

ಶಾಲೆ ಆರಂಭಿಸುವ ಎಲ್ಲ ಪ್ರಯತ್ನದಲ್ಲೂ ನಾವು ಯಶಸ್ಸು ಕಂಡಿದ್ದೇವೆ. ಶೇ.20 ರಷ್ಟು ಇನ್ನೂ ಸಫಲವಾಗಿಲ್ಲ, ಅದನ್ನು ಪೂರ್ಣಗೊಳಿಸುತ್ತೇವೆ. ಗ್ರಾಮೀಣ ಭಾಗದ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಚೆನ್ನಾಗಿದೆ. ಶಿಕ್ಷಣ ಇಲಾಖೆಯ ಜೊತೆ ಆರ್‌ಡಿಪಿಆರ್ ಇಲಾಖೆಯ ಸಿಬ್ಬಂದಿಯನ್ನು ಬಳಸಿಕೊಂಡು ಮಕ್ಕಳನ್ನು ಶಾಲೆಗೆ ಕರೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ದೊಡ್ಡ ಮಕ್ಕಳು ಶಾಲೆಗೆ ಬರುತ್ತಿಲ್ಲ, ಎಲ್ಲಿ ಹೋಗಿದ್ದಾರೆ ಎಂದು ತಿಳಿಯುತ್ತಿಲ್ಲ. ಅವರನ್ನು ಹುಡುಕಿ ಕರೆತರುವ ಪ್ರಯತ್ನ ಮಾಡುತ್ತೇವೆ. ಚಿಕ್ಕಮಗಳೂರಿನಲ್ಲಿ145 ಮಕ್ಕಳು ಹೊರಗುಳಿದಿದ್ರು, 102 ಮಕ್ಕಳನ್ನು ಕರೆತಂದಿದ್ದೇವೆ ಎಂದು ತಿಳಿಸಿದರು.