ಧ್ವನಿವರ್ಧಕಗಳ ಮೂಲಕ ಹನುಮಾನ್ ಚಾಲೀಸಾ ಪಠಿಸಿದ ಎಂಎನ್‍ಎಸ್.

51
firstsuddi

ಮುಂಬೈ : ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಕಾರ್ಯಕರ್ತರು ಮುಂಬೈನ ಚಾರ್ಕೋಪ್ ಪ್ರದೇಶದ ಕಟ್ಟಡವೊಂದರ ಟೆರೇಸ್ ನಲ್ಲಿ ಆಜಾನ್ ಕೂಗುವ ಸಂದರ್ಭದಲ್ಲಿ ಧ್ವನಿವರ್ಧಕದ ಮೂಲಕ ಹನುಮಾನ್ ಚಾಲೀಸಾ ಪಠಿಸಿದ್ದಾರೆ.

ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ನಿನ್ನೆ ತಮ್ಮ ಬೆಂಬಲಿಗರಿಗೆ ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದ್ದರು. ಅದರಂತೆ ಹನುಮಾನ್ ಚಾಲೀಸಾ ಪಠಣ ಹಾಗೂ ಜೈ ಶ್ರೀರಾಮ್ ಘೋಷಣೆಗಳು ಮೊಳಗಿವೆ. ಪೊಲೀಸರು ಮುನ್ನೆಚ್ಚರಿಕೆ ಸೂಚನೆ ನೀಡಿದ ನಂತರವೂ ಇಂದು ಧ್ವನಿವರ್ಧಕಗಳಲ್ಲಿ ಹನುಮಾನ್ ಚಾಲೀಸಾ ನುಡಿಸಲು ನೀಡಿರುವ ಮುಕ್ತ ಕರೆಗಾಗಿ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ ನಿವಾಸದ ಹೊರಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಮಸೀದಿಗಳ ಮೇಲಿರುವ ಧ್ವನಿವರ್ಧಕ ತೆರವುಗೊಳಿಸುವಂತೆ ರಾಜ್ ಠಾಕ್ರೆ ಇತ್ತೀಚಿಗೆ ಕರೆ ನೀಡಿದ್ದರು. ಇದೇ ವಿಚಾರವಾಗಿ ಅವರ ವಿರುದ್ಧ ಪ್ರಕರಣ ಸಹ ದಾಖಲಾಗಿದೆ.