ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ – ರಸ್ತೆ ಸಂಚಾರ ಬಂದ್…

110
firstsuddi

ಚಿಕ್ಕಬಳ್ಳಾಪುರ : ನಿನ್ನೆ ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ತಾಲೂಕಿನ ನಂದಿ ಬೆಟ್ಟದ ತಪ್ಪಲಿನಲ್ಲಿರುವ ಬ್ರಹ್ಮಗಿರಿ ಗುಡ್ಡ ಕುಸಿದಿದೆ.  ನಂದಿಬೆಟ್ಟದಲ್ಲಿ ಗುಡ್ಡ ಕುಸಿತವಾಗಿದ್ದು, ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ರಸ್ತೆಗೆ ಅಡ್ಡಲಾಗಿ ಬಂಡೆಗಳು ಉರುಳಿ ನಿಂತಿವೆ. ರಸ್ತೆ ಬಂದ್ ಆಗಿದ್ದರಿಂದ ನಂದಿಬೆಟ್ಟಕ್ಕೆ ಬಂದಿರುವ ಪ್ರವಾಸಿಗರನ್ನು ವಾಪಸ್ ಕಳುಹಿಸಲಾಗುತ್ತಿದೆ.

ಇನ್ನೂ ಭಾರೀ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿದಿದ್ದು, ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿದೆ. ಅಲ್ಲದೆ ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಜೈಭೀಮ್ ನಗರ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನಗರಸಭೆ ಅಧಿಕಾರಿಗಳ ವಿರುದ್ಧ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.