ಛತ್ತೀಸ್ಗಢ : ನಕ್ಸಲರು ಹಾಗೂ ಪೊಲೀಸರ ನಡುವೆ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು ನಾಲ್ವರು ನಕ್ಸಲರನ್ನು ಹತ್ಯೆಗೈದಿದ್ದು, ಈ ವೇಳೆ ಓರ್ವ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ. ಛತ್ತೀಸ್ಘಡದ ರಾಜನಂದಗಾಂವ್ ಹಾಗೂ ಮದನ್ವಾಡ್ ಅರಣ್ಯ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ನಕ್ಸಲರು ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಪೊಲೀಸರು ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ್ದು, ಈ ಕಾರ್ಯಾಚರಣೆಯಲ್ಲಿ ಮದನ್ವಾಡ್ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶ್ಯಾಮ್ ಕಿಶೋರ್ ಶರ್ಮಾ ಅವರು ಹುತಾತ್ಮರಾಗಿದ್ದಾರೆ. ಎನ್ಕೌಂಟರ್ನಲ್ಲಿ ಮೃತಪಟ್ಟ ನಾಲ್ವರು ನಕ್ಸಲರ ಮೃತದೇಹ ಹಾಗೂ ಅವರ ಬಳಿ ಇದ್ದ AK-47ರೈಫಲ್, 1 ಎಸ್ಎಲ್ಆರ್ ಬಂದೂಕು ಹಾಗೂ 315 ಬೊರಿ ರೈಫಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.










