ನಟಿ ಉಮಾಶ್ರೀ ಅವರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ವೈದ್ಯೆ ಚಿಕಿತ್ಸೆ ಫಲಿಸದೆ ಸಾವು…

147
firstsuddi

ಹುಬ್ಬಳ್ಳಿ : ಈ ಹಿಂದೆ ತಾಲ್ಲೂಕಿನ ಬಂಡಿವಾಳ ಬಳಿ ನಡೆದ ನಟಿ ಉಮಾಶ್ರೀ ಅವರ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವೈದ್ಯೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಟಿ ಉಮಾಶ್ರೀ ಅವರ ಮಾಲೀಕತ್ವದ ಕಾರು ನವೆಂಬರ್ 20ರಂದು ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವೈದ್ಯೆ ಸ್ಮಿತಾ ಕಟ್ಟಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಉಮಾಶ್ರೀ ಅವರ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರೂ ಕೂಡಾ ಆಸ್ಪಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಪ್ರಕರಣ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.