ನಟಿ ಜಾಕ್ವೆಲಿನ್ ಫರ್ನಾಂಡಿಸ್‍ಗೆ ಮಧ್ಯಂತರ ಜಾಮೀನು…

78
firstsuddi

ನವದೆಹಲಿ: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಇಂದು ಮಧ್ಯಂತರ ಜಾಮೀನು ಸಿಕ್ಕಿದೆ.

ತಮಗೆ ಜಾಮೀನು ನೀಡುವಂತೆ ನಟಿ ಇಂದು ತಮ್ಮ ವಕೀಲರೊಂದಿಗೆ ದೆಹಲಿಯ ಪಟಿಯಾಲ ಕೋರ್ಟ್ ಮೆಟ್ಟಿಲೇರಿದ್ದರು. ಇವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲಿಕ್ ಅವರು 50,000 ರೂಪಾಯಿಗಳ ಭದ್ರತಾ ಬಾಂಡ್ ಜೊತೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿದೆ.

ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಮತ್ತಿತರರೊಂದಿಗೆ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ವಿಕ್ರಾಂತ್ ರೋಣ ಚಿತ್ರದ ರಾ ರಾ ರಕ್ಕಮ್ಮ, ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.