ಹಿಂದಿ ಕಿರುತೆರೆಯ ಖ್ಯಾತ ನಟಿ ತುನಿಷಾ ಶರ್ಮಾ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ಮೂಡಿದ್ದವು. ಇದೊಂದು ಲವ್ ಜಿಹಾದ್. ಹಾಗಾಗಿಯೇ ಸತ್ತಿದ್ದಾಳೆ ಎಂದೂ ಹೇಳಲಾಗಿತ್ತು. ಇದೀಗ ಈ ಎಲ್ಲ ಅನುಮಾನಗಳಿಗೆ ಉತ್ತರ ಸಿಕ್ಕಿದೆ.
ನಟಿಯ ಮರಣೋತ್ತರ ವರದಿ ಸಿಕ್ಕಿದ್ದು, ತುನಿಷಾ ಅವರದ್ದು ಆತ್ಮಹತ್ಯೆ ಎಂದು ಬಹಿರಂಗವಾಗಿದೆ. ಅಲ್ಲದೇ, ಅವರು ಗರ್ಭಿಣಿ ಎಂದು ಹೇಳಲಾಗಿತ್ತು. ಅದು ಕೂಡ ಸುಳ್ಳು ಎನ್ನುವ ವರದಿ ಬಂದಿದೆ. ಮೈಮೇಲೆ ಯಾವುದೇ ತರಹದ ಗುರುತುಗಳು ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನೂ ಈ ಸಾವಿಗೆ ಆಕೆಯ ಪ್ರಿಯಕರ ಶಿಜಾನ್ ಕಾರಣ ಎಂದು ಆರೋಪಿಸಲಾಗಿದೆ. ಸಿಕ್ಕಿರುವ ಡೆತ್ ನೋಟ್ ನಲ್ಲಿ ಶಿಜಾನ್ ಹೆಸರನ್ನು ಆಕೆ ಉಲ್ಲೇಖಿಸಿದ್ದರು ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಜಾನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈ ಎಂಬಲ್ಲಿ ಶನಿವಾರ ಶೂಟಿಂಗ್ ಸೆಟ್ ನಲ್ಲಿಯೇ ತುನೀಶಾ ಶರ್ಮಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಕೇವಲ 15 ದಿನಗಳ ಹಿಂದೆಯಷ್ಟೇ ಅವರಿಗೆ ಲವ್ ಬ್ರೇಕ್ ಅಪ್ ಆಗಿತ್ತು ಎಂದು ಹೇಳಲಾಗುತ್ತಿದ್ದು, ಈ ಕಾರಣಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ.










