ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಕನ್ನಡ ಪರ ಹೋರಾಟಗಾರ ನಾಗೇಶ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದು, ಕೆಲವು ದಿನಗಳ ಹಿಂದೆ ತೆಲುಗು ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು ನನಗೆ ಕನ್ನಡ ಮಾತನಾಡಲು ಬಹಳ ಕಷ್ಟವಾಗುತ್ತದೆ, ನನಗೆ ಕನ್ನಡ ಮಾತನಾಡಲು ಬರುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರಿಂದ ಕನ್ನಡಪರ ಹೋರಾಟಗಾರರು ರಶ್ಮಿಕಾ ಮಂದಣ್ಣ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ಫಿಲ್ಮ್ ಚೇಂಬರ್ ಗೆ ಮನವಿ ಸಲ್ಲಿಸಿದ್ದಾರೆ.










