ನಟಿ ರಾಗಿಣಿ ದ್ವಿವೇದಿ ಅವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು…

205
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಇಂದು ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮನೆಯನ್ನು ತಪಾಸಣೆ ನಡೆಸಿ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ರಾಗಿಣಿ ಅವರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಪೊಲೀಸ್ ವಾಹನದಲ್ಲೇ ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.