ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರಿಗೆ ಇಡಿ ಸಮ್ಮನ್ಸ್ ಜಾರಿ…

236
firstsuddi

ಮುಂಬೈ : ಭೂಗತ ಜಗತ್ತಿನೊಂದಿಗೆ ಹಣಕಾಸು ಅವ್ಯವಹಾರ ನಡೆಸಿದ ಆರೋಪದ ಮೇಲೆ ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರಿಗೆ ಇಡಿ ಅಧಿಕಾರಿಗಳು ಸಮ್ಮನ್ಸ್ ಜಾರಿ ಮಾಡಿದ್ದು, ನವೆಂಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಇಕ್ಬಾಲ್ ಮಿರ್ಚಿಯ ಜೊತೆ ರಾಜ್ ಕುಂದ್ರಾ ಅವರು ವ್ಯವಹಾರ ಬೆಳೆಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಅವರಿಗೆ ನವೆಂಬರ್ 4ರಂದು ಮುಂಬೈನ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.