ನಟ ಅರ್ಜುನ್ ಸರ್ಜಾಗೆ ಕೊರೊನಾ ಸೋಂಕು ದೃಢ.

96
firstsuddi

ಚೆನ್ನೈ : ನಟ ಅರ್ಜುನ್ ಸರ್ಜಾ ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದಾರೆ.

‘ಎಲ್ಲರಿಗೂ ಹಾಯ್, ನನಗೆ ಕೊವಿಡ್ ಪಾಸಿಟಿವ್ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಾನು ಈಗ ಚೆನ್ನಾಗಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಿ. ಮಾಸ್ಕ್ ಧರಿಸುವುದನ್ನು ಮರೆಯಬೇಡಿ. ರಾಮ ಭಕ್ತ ಹನುಮಾನ್ ಕಿ ಜೈ’ ಎಂದು ತಮ್ಮ ಇನ್ ಸ್ಟಾಗ್ರಾಮ್ ಸ್ಟೋರಿಯಲ್ಲಿ ಅರ್ಜುನ್ ಸರ್ಜಾ ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ನಟಿ ಕರೀನಾ ಕಪೂರ್ ಅವರಿಗೆ ಕೋವಿಡ್ ಸೋಂಕು ತಗಲಿರುವ ವಿಷಯ ಬಹಿರಂಗ ಆಗಿತ್ತು. ಇದೀಗ ಅರ್ಜುನ್ ಸರ್ಜಾ ಅವರಿಗೂ ಕೊರೊನಾ ಸೋಂಕು ತಗುಲಿದೆ ಎನ್ನುವ ವಿಚಾರ ಹೊರಬಿದ್ದಿದೆ.