ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಕೋಟಿಗೊಬ್ಬ-3 ಚಿತ್ರದ ಟೀಸರ್ ಬಿಡುಗಡೆ…

147

ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಕೋಟಿಗೊಬ್ಬ-3 ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಭಾರಂಭವನ್ನು ಕಂಡಿದೆ. “ಕೋಟಿಗೊಬ್ಬ-3” ಚಿತ್ರ ಶಿವ ಕಾರ್ತಿಕ್ ನಿರ್ದೇಶನ ಹಾಗೂ ಸೂರಪ್ಪ ಬಾಬು ನಿರ್ಮಾಣದಲ್ಲಿ ಮೂಡಿಬರುತ್ತಿದ್ದು, ಈಗ ಬಿಡುಗಡೆಯಾಗಿರುವ ಟೀಸರ್ನಲ್ಲಿ ಚಿತ್ರದ ಕಾಮಿಡಿ ಹಾಗೂ ಲವ್ ಸ್ಟೋರಿ ಕಂಡುಬಂದಿದೆ. ಕಿಚ್ಚ ಸುದೀಪ್ ಅವರಿಗೆ ಮಾಡೋನಾ ಸೆಬಾಸ್ಟಿಯನ್ ಹಾಗೂ ಶ್ರದ್ಧಾ ದಾಸ್ ಅವರು ನಾಯಕಿಯರಾಗಿದ್ದಾರೆ.