ನಟ ದುನಿಯಾ ವಿಜಯ್- ಪಾನಿಪುರಿ ಕಿಟ್ಟಿ ಜಗಳ ಕೇಸ್ ರೀ ಓಪನ್…

60
firstsuddi

ನಟ ದುನಿಯಾ ವಿಜಯ್ ಮತ್ತು ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ನಡುವಿನ ಜಗಳ ಪ್ರಕರಣ ಮತ್ತೆ ರೀ ಓಪನ್ ಆಗಿದೆ. ವಿಜಯ್ ಕೋರ್ಟ್ ಮುಖಾಂತರ ಕೇಸ್ ರೀ ಓಪನ್ ಮಾಡಿಸಿದ್ದು, ಕೋರ್ಟ್ ಆದೇಶದ ಮೇರೆಗೆ ಪಾನಿಪುರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್ಐಆರ್ ದಾಖಲಿಸಲಾಗಿದೆ.

ಏನಿದು ಘಟನೆ?
2018ರಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆದಿದ್ದ ಬಾಡಿ ಬಿಲ್ಡರ್ ಸ್ಪರ್ಧೆಯಲ್ಲಿ ಪಾನಿಪುರಿ ಕಿಟ್ಟಿ ಟೀಂಗೂ ಹಾಗೂ ದುನಿಯಾ ವಿಜಯ್ ಟೀಂ ಗೂ ಗಲಾಟೆ ನಡೆದಿತ್ತು. ಅಂದು ಸ್ಪರ್ಧೆ ಮಾಡಿದ್ದ ಪಾನಿಪುರಿ ಕಿಟ್ಟಿಯ ಸಹೋದರ ಮಾರುತಿ ಗೌಡನನ್ನು ಗಲಾಟೆ ನಂತರ ದುನಿಯಾ ವಿಜಯ್ ಕಾರಿನಲ್ಲಿ ಕರೆದುಕೊಂಡು ಹೋಗಿ, ಹಿಗ್ಗಮುಗ್ಗ ಥಳಿಸಿದ್ದರು ಎಂದು ಆರೋಪಿಸಲಾಗಿತ್ತು.

ನಂತರ ಮಧ್ಯರಾತ್ರಿ ಪೊಲೀಸರ ಕರೆ ಮೇರೆಗೆ ವಾಪಸ್ ಕರೆತಂದಿದ್ದೂ ಬಿಟ್ಟಿದ್ದರು ಎಂದು ಹೇಳಲಾಗಿತ್ತು. ತೀವ್ರ ಥಳಿತಕ್ಕೊಳಗಾಗಿದ್ದ ಮಾರುತಿ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆದಿದ್ದರು. ಗಲಾಟೆ ನಂತರ ಎರಡೂ ಕಡೆ ಕೌಂಟರ್ ಕಂಪ್ಲೆಂಟ್ ದಾಖಲಾಗಿತ್ತು. ನನ್ನ ಮಗ ಸಾಮ್ರಾಟ್ ನಿಗೆ ಬೈದು ಬೆದರಿಕೆ ಹಾಕಿದ್ರು ಎಂದು ವಿಜಯ್ ದೂರು ನೀಡಿದ್ರು. ವಿಜಯ್ ಮೇಲೆ ಪಾನಿಪುರಿ ಕಿಟ್ಟಿ ಕೂಡ ದೂರು ದಾಖಲಿಸಿದ್ದರು.

ಸದ್ಯ ವಿಜಯ್ ಮೇಲಿರುವ ಕೇಸ್ ನಡೀತಾ ಇದೆ. ಆದರೆ ಪಾನಿಪುರಿ ಕಿಟ್ಟಿಮೇಲೆ ನೀಡಿದ್ದ ದೂರು ಸಾಕ್ಷ್ಯಗಳ ಕೊರೆತೆಯಿಂದಾಗಿ ಕ್ಲೋಸ್ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ವಿಜಯ್ ಹೈಕೋರ್ಟ್ ಮೆಟ್ಟಿಲು ಹತ್ತಿದ್ದರು. ವಿಜಯ್ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್ ಇನ್ನೊಮ್ಮೆ ಕೇಸ್ ತನಿಖೆ ನಡೆಸಲು ಸೂಚನೆ ನೀಡಿದೆ. ಇದೀಗ ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.