ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು ಬೆಳಗ್ಗೆ ಕೊರೊನಾ ದೃಢಪಟ್ಟಿದ್ದು, ಇದೀಗ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ನಟ ನಿಖಿಲ್ ಕುಮಾರಸ್ವಾಮಿ ಅವರು, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗಿ” ಎಂದು ಮನವಿ ಮಾಡಿಕೊಂಡಿದ್ದಾರೆ.
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021










