ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್ ಕುಮಾರ್ ಅಸ್ವಸ್ಥರಾಗಿದ್ದಾರೆ. ಮೊದಲು ರಮಣಶ್ರೀ ಆಸ್ಪತ್ರೆಯಲ್ಲಿ ಪ್ರಥಮ ಚಿಕ್ಸಿತ್ಸೆ ಕೊಡಿಸಲಾಗಿದೆ. ನಂತರ ನಗರದ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ರಾಜ್ ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ಅವರಿಗೆ ವೈದ್ಯರು ಇಸಿಜಿ ಮಾಡಿದ್ದಾರೆ. ಪುನೀತ್ ಆರೋಗ್ಯದ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.










