ಚೆನ್ನೈ : ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಅಲ್ವಾರ್ ಪೇಟ್ ನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಅಕ್ಟೋಬರ್ 25ರಂದು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜಿನಿಕಾಂತ್(70) ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಯಿತು.










