ನಟ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ…

69
firstsuddi

ಬೆಂಗಳೂರು : ನಟ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ನಗರ ವಿವಿ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನಟ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು.

85ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ನಟ ರವಿಚಂದ್ರನ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರವಿಚಂದ್ರನ್ ಸೇರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.

ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿ. ರವಿಚಂದ್ರನ್, ಸಮಾಜ ಸೇವೆಗಾಗಿ ಎಂ. ಆರ್ ಜೈ ಶಂಕರ್, ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಸತ್ಯನಾರಾಯಣ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಈ ಸಂದರ್ಭದಲ್ಲಿ ನಟ ರವಿಚಂದ್ರನ್ ಪತ್ನಿ ಸುಮತಿ, ಮಕ್ಕಳಾದ ವಿಕ್ರಮ್, ಮನೋರಂಜನ್, ಗೀತಾಂಜಲಿ ಹಾಗೂ ಅಳಿಯ ಅಜಯ್ ಭಾಗಿಯಾಗಿದ್ದರು.