ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ(83) ಇಂದು ಬೆಳಿಗ್ಗೆ 6.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರು ಹಲವು ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ.
ರವಿಚಂದ್ರನ್, ಬಾಲಾಜಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಪಟ್ಟಮ್ಮಾಳ್ ವೀರಸ್ವಾಮಿ ಅಗಲಿದ್ದಾರೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ರವಿಚಂದ್ರನ್ ಕುಟುಂಬದವರು ತಿಳಿಸಿದ್ದಾರೆ.










