ನಟ ಶಾರೂಖ್, ನಟಿ ಅನನ್ಯಾ ಪಾಂಡೆ ಮನೆ ಮೇಲೆ ಎನ್‍ಸಿಬಿ ದಾಳಿ…

70
firstsuddi

ಮುಂಬೈ : ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ ಎನ್‍ಸಿಬಿ ದಾಳಿ ನಡೆಸಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ ‘ಮನ್ನತ್’ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೇ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯ ಮೇಲೂ ದಾಳಿ ನಡೆಸಿದ್ದು, ಎನ್‍ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

 ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಅವರನ್ನು ಇಂದು ಶಾರೂಖ್ ಅರ್ಥರ್ ರೋಡ್ ಜೈಲಿನಲ್ಲಿ ಭೇಟಿಯಾಗಿದ್ದರು. ಶಾರೂಖ್ ಮಗನನ್ನು ಭೇಟಿಯಾದ ಬೆನ್ನಲ್ಲೇ ಇದೀಗ ಎನ್‍ಸಿಬಿ ಶಾಕ್ ನೀಡಿದೆ.