ನಟ ಶಿವಣ್ಣ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

41

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಾಗಿಲ ಬಳಿ ಬಂದು ಸಿದ್ದರಾಮಯ್ಯ ಅವರನ್ನು ಬರ ಮಾಡಿಕೊಂಡ ಶಿವರಾಜ್ ಕುಮಾರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ಬಳಿಕ ಹಿಂತಿರುಗಿ ಬಂದ ಬಳಿಕ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ ಎಂದು ತಿಳಿಸಿದರು. ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ತಿಳಿಸಿದರು.