ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ನೀರುಪಾಲು!

49
firstsuddi

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ನಡೆದಿದೆ.

ಆರು ಜನ ಸ್ನೇಹಿತರು ಇಂದು ಮಧ್ಯಾಹ್ನ ಘಟಪ್ರಭಾ ನದಿಗೆ ಈಜಲು ಹೋಗಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಇದೀಗ ನಾಲ್ಕು ಮಂದಿಯ ಮೃತ ದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ.

ಮೃತರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಗೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.