ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು…

50
firstsuddi

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ(15) ಮತ್ತು ಆವಂತಿಕಾ(11) ಎಂಬ ಸಹೋದರಿಯರು ಮೃತ ದುರ್ದೈವಿಗಳು.

ಇವರು ಬೆಂಗಳೂರಿನಲ್ಲಿ ವಾಸವಿದ್ದೂ, ಊರಿನಲ್ಲಿ ನಡೆಯುವ ಕಾರ್ಯಕ್ರಮದ ನಿಮಿತ್ತ ಬಳ್ಪಕ್ಕೆ ಬಂದಿದ್ದರು ಎನ್ನಲಾಗಿದೆ. ನದಿ ನೀರಲ್ಲಿ ಬಾಲಕಿಯರು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿ ಬಾಲಕಿಯರ ಮೃತದೇಹಗಳನ್ನು ಹೊರತೆಗಿದ್ದಾರೆ.

ಸ್ಥಳಕ್ಕೆ ಸುಬ್ರಮಣ್ಯ ಪೊಲೀಸರು ಆಗಮಿಸಿದ್ದಾರೆ. ಹಿಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.