ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಚುನಾವಣೋತ್ತರ ಸಮೀಕ್ಷೆಯನ್ನು ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದಂತೆ ಇದೆ. ದೇಶದಲ್ಲಿನ ಪ್ರಸ್ತುತ ವಸ್ತು ಸ್ಥಿತಿ ಬೇರೆ ರೀತಿಯಲ್ಲಿ ಇದೆ. 300 ಸೀಟು ಬರುತ್ತದೆ ಎಂದು ಬಿಜೆಪಿ ನಾಯಕರು ಹೇಳಿಸಿಕೊಂಡು ಸಮಾಧಾನ ಪಡುತ್ತಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ದೇಶದ ವಾಸ್ತವ ಸ್ಥಿತಿಯನ್ನು ತಿಳಿಯಬಹುದು. ದೇಶದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬುರುವುದು ಖಚಿತ. ದೆಹಲಿಯಲ್ಲಿ ನಡೆಸಿದ ಸಭೆಯಲ್ಲೂ ಈ ಬಗ್ಗೆ ಚರ್ಚಿಸಲಾಗಿತ್ತು. ಅಲ್ಲಿ ಸಿಕ್ಕ ಮಾಹಿತಿಯ ಪ್ರಕಾರ ಯುಪಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನನಗೆ ಚುನಾವಣಾ ಸಮೀಕ್ಷೆಗಳ ಬಗ್ಗೆ ವಿಶ್ವಾಸವಿಲ್ಲ ಎಂದು ಹೇಳಿದರು.










