ನನ್ನ ಅಧಿಕಾರದಲ್ಲಿ ಬೇರೆಯವರು ಮೂಗು ತೂರಿಸೋದು ನಾನು ಸಹಿಸಲ್ಲ : ಸಚಿವ ಸಿ.ಪಿ. ಯೋಗೇಶ್ವರ್.

119
firstsuddi

ಬೆಂಗಳೂರು : ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಅವರು, ನಾನು ದೆಹಲಿಗೆ ಹೋಗಿದ್ದು ನಿಜ. ನಾನು ಯಾವಾಗಲೂ ದೆಹಲಿಗೆ ಹೋಗ್ತೀನಿ ಬರ್ತೀನಿ. ನನ್ನ ವೈಯಕ್ತಿಕ ಕಾರಣಕ್ಕಾಗಿ ನಾನು ದೆಹಲಿಗೆ ಹೋಗಿದ್ದೆ. ಯಾವ ವಿಚಾರಕ್ಕೆ ನಾನು ದೆಹಲಿಗೆ ಹೋಗಿದ್ದೆ ಎಂದು ಹೇಳಲು ಹೋಗಲ್ಲ. ನನ್ನ ವಿಚಾರ ಎಲ್ಲಿ ಹೇಳಬೇಕೋ ಅಲ್ಲಿ ಹೇಳ್ತೀನಿ. ವರಿಷ್ಠರ ಮುಂದೆ ನನ್ನ ನೋವು ತೋಡಿಕೊಳ್ತೇನೆ. ನನ್ನ ಅಧಿಕಾರದಲ್ಲಿ ನನ್ನ ಮಗ ಮೂಗು ತೂರಿಸಿದ್ರೆ ಅದು ಸರಿಯಲ್ಲ. ಕೆಲವು ವಿಚಾರ ಹಂಚಿಕೊಳ್ಳಲು ಆಗಲ್ಲ. ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೆಸ್, ಜೆಡಿಎಸ್, ಮತ್ತು ಬಿಜೆಪಿ ಮೂರು ಪಕ್ಷಗಳ ಸರ್ಕಾರ ಅಧಿಕಾರದಲ್ಲಿದೆ. ನನ್ನ ಅಧಿಕಾರದಲ್ಲಿ ಬೇರೆಯವರು ಮೂಗು ತೂರಿಸೋದು ನಾನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಬದಲಾವಣೆ ಮಾಡಿಸುವಷ್ಟು ನಾನು ದೊಡ್ಡವನಲ್ಲ. ಅಷ್ಟೊಂದು ಶಕ್ತಿ ನನಗೆ ಇಲ್ಲ. ಆ ಅಭಿಪ್ರಾಯವೂ ನನಗೆ ಇಲ್ಲ. ನನಗೆ ಅಸಮಾಧಾನವಿದೆ, ಕೆಲವೊಂದು ನೋವುಗಳಿವೆ. ಹೀಗಾಗಿ ದೆಹಲಿಗೆ ಹೋಗಿದ್ದೇನೆ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳವುದಿಲ್ಲ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.