ನನ್ನ ಫೋನ್‌ನಲ್ಲೂ ಪೆಗಾಸಸ್ ಇತ್ತು : ರಾಹುಲ್ ಗಾಂಧಿ.

55
firstsuddi

ಲಂಡನ್ : ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಸ್ರೇಲ್ ಸ್ಪೈವೇರ್ ಪೆಗಾಸಸ್ ನನ್ನ ಫೋನ್ ನಲ್ಲೂ ಇದೆ. ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಸಲಹೆಗಾರ ಸ್ಯಾಮ್ ಪಿತ್ರೋಡಾ, ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್ ನಲ್ಲಿ ಎಂಬಿಎ ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಮಾಡಿದ ಭಾಷಣದ ಯೂಟ್ಯೂಬ್ ಲಿಂಕ್ ಅನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. “ನಿಮ್ಮ ಫೋನ್ ಕರೆಗಳು ರೆಕಾರ್ಡ್ ಆಗಿತ್ತಿದೆ. ಫೋನ್‌ನಲ್ಲಿ ಮಾತನಾಡುವಾಗ ಜಾಗರೂಕರಾಗಿರಿ ಎಂದು ಗುಪ್ತಚರ ಅಧಿಕಾರಿಗಳು ನನಗೆ ಎಚ್ಚರಿಕೆ ನೀಡಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ನಾನೇ ನನ್ನ ಫೋನ್ ನಲ್ಲಿ ಪೆಗಾಸಸ್ ಹೊಂದಿದ್ದೇನೆ. ಹೆಚ್ಚಿನ ಸಂಖ್ಯೆಯ ರಾಜಕಾರಣಿಗಳ ಫೋನ್ ಗಳಲ್ಲಿ ಪೆಗಾಸಸ್ ಇತ್ತು. ಜಾಗರೂಕರಾಗಿರಿ ಎಂದು ಗುಪ್ತಚರ ಅಧಿಕಾರಿಗಳು ನನಗೆ ಎಚ್ಚರಿಸಿದ್ದಾರೆ ಎಂದು ಹೇಳಿದ್ದಾರೆ.

ಭಾರತೀಯ ಪ್ರಜಾಪ್ರಭುತ್ವ ಆಕ್ರಮಣಕ್ಕೆ ಒಳಗಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಜಾಪ್ರಭುತ್ವಕ್ಕೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟಾದ ಸಂಸತ್ತು, ಮಾಧ್ಯಮ, ನ್ಯಾಯಾಂಗವನ್ನೂ ನಿರ್ಬಂಧಿಸಲಾಗುತ್ತಿದೆ. ಹಾಗಾಗಿ, ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ನಡೆಯುತ್ತಿದೆ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.