ನನ್ನ ಮಗ ಹಾಕಿದ್ದು ಒರಿಜಿನಲ್ ಅಲ್ಲ, ಪ್ಲಾಸ್ಟಿಕ್ ಉಗುರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.

60
firstsuddi

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗಿದೆ. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ನನ್ನ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಧರಿಸಿರುವುದು ಪ್ಲಾಸ್ಟಿಕ್ ಪೆಂಡೆಂಟ್. ಮದುವೆ ಸಮಯದಲ್ಲಿ ಯಾರೋ ನನ್ನ ಪುತ್ರನಿಗೆ ಗಿಫ್ಟ್ ಕೊಟ್ಟಿದ್ದರು. ಅದು ಒರಿಜಿನಲ್ ಪೆಂಡೆಂಟ್ ಅಲ್ಲ ಎಂದು ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಸಸ್ಯಾಹಾರಿ ಹುಲಿ, ಜಿಂಕೆ ಕೋಳಿ ಇನ್ಯಾವುದೇ ಬಲಿಯನ್ನು ನಾನು ಇಷ್ಟ ಪಡಲ್ಲ. ಸದ್ಯ ನಮ್ಮ ಸಂಬಂಧಿಕರು ಬಂದಿದ್ದಾರೆ ಅವರನ್ನು ಬೀಳ್ಕೊಟ್ಟು ಬರ್ತಿನಿ. ಅಧಿಕಾರಿಗಳ ಪರಿಶೀಲನೆಗೆ ಸಹಕಾರ ನೀಡುತ್ತೇನೆ. ನಂತರ ಅಧಿಕಾರಿಗಳು ಕೇಳುವ ಎಲ್ಲದಕ್ಕೂ ಉತ್ತರ ಕೊಡ್ತಿವಿ ಎಂದಿದ್ದಾರೆ.

ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಅರಣ್ಯಾಧಿಕಾರಿಗಳು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಡಿಸಿಎಫ್ ಶಂಕರ್ ಕಲ್ಲೋಳಕರ್ ನೇತೃತ್ವದಲ್ಲಿ ಮೂರು ಜನ ಎಸಿಎಫ್, ಆರ್‌ಎಫ್‌ಒ ಮೂರು ಜನ, ಹದಿನೈದು ಜನ ಸಿಬ್ಬಂದಿ, ಓರ್ವ ವೆಟನರಿ ವೈದ್ಯ ಸೇರಿದಂತೆ 24 ಜನರ ತಂಡ ಪರಿಶೀಲನೆ ನಡೆಸಿದೆ.

ಪೆಂಡೆಂಟ್ ವಶಕ್ಕೆ ಪಡೆದು ಎಫ್‌ಎಸ್‌ಎಲ್​ಗೆ ಕಳುಹಿಸುತ್ತೇವೆ. ಬೆಂಗಳೂರು ಇಲ್ಲವೇ ಹೈದರಾಬಾದ್ ಗೆ ಕಳುಹಿಸುತ್ತೇವೆ. ಒರಿಜಿನಲ್ ಅಥವಾ ನಕಲಿನಾ ಅಂತಾ ತಿಳಿದ ಬಳಿಕ ಹೇಳುತ್ತೇವೆ. ಪೆಂಡೆಂಟ್ ಸೈಜ್ ಎಷ್ಟಿದೆ ಅನ್ನೋದನ್ನ ನೋಡಿದ್ದೇವೆ. ಮೃಣಾಲ್ ಅವರ ಕಡೆಯಿಂದ ಹೇಳಿಕೆಯನ್ನ ಪಡೆಯುತ್ತೇವೆ. ಕಾನೂನಿನಡಿಯಲ್ಲಿ ಎಲ್ಲವನ್ನೂ ಮಾಡುತ್ತೇವೆ ಎಂದು ಡಿಸಿಎಫ್ ಶಂಕರ್ ಕಲ್ಲೋಳಕರ್ ಹೇಳಿದ್ದಾರೆ.