ನನ್ನ ಮೌನವೂ ವೀಕ್ನೆಸ್ ಅಲ್ಲ: ಸತೀಶ್ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು…

54
firstsuddi

ಬೆಳಗಾವಿ: ನನ್ನ ಮೌನವೂ ವೀಕ್ನೆಸ್ ಅಲ್ಲ ಎನ್ನುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿರುಗೇಟು ನೀಡಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲಾ ರಾಜಕಾರಣದ ಬಗ್ಗೆ ಬೆಳಗಾವಿ ಮಾಧ್ಯಮಗಳಿಗೆ ಗೊತ್ತಿದೆ. ಬೇರೆ ಜಿಲ್ಲೆಯ ವರದಿಗಾರರು ಕೇಳಿದ್ರೆ ಉತ್ತರ ಕೊಡುತ್ತಿದ್ದೆ. ನಮ್ಮ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಣ್ಣ ಸಮಸ್ಯೆಯಿಲ್ಲ. ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವೆಲ್ಲರೂ ಹೊಂದಾಣಿಕೆಯಿಂದ ಕೆಲಸ ಮಾಡ್ತಿದ್ದೇವೆ ಎಂದರು.

ನನ್ನ ಮತ್ತು ಸತೀಶ್ ಅಣ್ಣವರ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅಣ್ಣವರು ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೋಗಲಿಲ್ಲ ಎಂದು ತಮ್ಮ ಮತ್ತು ಸತೀಶ್ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟವಿದೆ ಎಂಬ ವಂದತಿಗೆ ಸ್ಪಷ್ಟನೆ ನೀಡಿದರು.

ಹೈಕಮಾಂಡ್ ಯಾಕೆ ತಡೆಯಿತು ಅನ್ನೋದನ್ನ ಸತೀಶ್ ಜಾರಕಿಹೊಳಿ ಅವರಿಗೆ ಕೇಳಿ. ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಳಗಾವಿ ಭೇಟಿಗೆ ಶಾಸಕರು, ಜಿಲ್ಲಾಧ್ಯಕ್ಷರು ಬಾರದಿರುವ ವಿಚಾರವಾಗಿ ಮಾತನಾಡಿದ ಅವರು ಅಧ್ಯಕ್ಷರ ಪ್ರವಾಸದಲ್ಲಿ ಮೊದಲು ಗೊಂದಲವಿತ್ತು. ಆದರೂ ಯಾರಾದರೂ ಬಂದು ಸ್ವಾಗತ ಮಾಡಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.