ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ : ಬಿಎಸ್‍ವೈ ಸ್ಪಷ್ಟನೆ…

56
firstsuddi

ಬೆಂಗಳೂರು : ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಕಡೆಗಣನೆ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ ಸ್ಪಷ್ಟಪಡಿಸಿದರು.

ನಾವೆಲ್ಲ ಒಟ್ಟಾಗಿ ಇದ್ದೇವೆ. ಒಂದಾಗಿ ಇದ್ದೇವೆ. ನಮ್ಮದು ಒಂದೇ ಅಜೆಂಡಾ ಮುಂದೆ ಚುನಾವಣೆ ಇದೆ. ಪಕ್ಷವನ್ನು ಅಧಿಕಾರಕ್ಕೆ ತರೋದು. ಸರ್ಕಾರ ಸ್ಥಾಪನೆ ಮಾಡೋದು. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕ್ತೀನಿ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣ ಇದೆ. ಮೋದಿ, ಅಮಿತ್ ಶಾ, ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದರು.

ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಆರೋಪದಲ್ಲಿ ಸತ್ಯಾಂಶ ಇಲ್ಲ. ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೆ ಮುಂದುವರಿಸುತ್ತೇನೆ ಎಂದರು.

ನಡ್ಡಾ ಕಾರ್ಯಕ್ರಮಕ್ಕೆ ಕೊನೆ ಕ್ಷಣದಲ್ಲಿ ಕರೆದರು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನ ಪಕ್ಷ ಕಡೆಗಣನೆ ಮಾಡುತ್ತಿಲ್ಲ. ಬೇರೆ ಕಾರಣಕ್ಕೆ ನಾನು ಇಂದು ಕಾರ್ಯಕ್ರಮಕ್ಕೆ ಹೋಗದೇ ಇರುವ ಸ್ಥಿತಿ ಇತ್ತು. ಆದರೆ ಈಗ ಹೋಗಲೇ ಬೇಕು ಅನ್ನೋ ಸ್ಥಿತಿ ಬಂತು. ಹೀಗಾಗಿ ಹೋಗುತ್ತಿದ್ದೇನೆ. ಈ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಆಹ್ವಾನ ಬಂದಿಲ್ಲ. ನಾನು ಹೋಗೋ ಸ್ಥಿತಿಯಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ ಎಂದು ಹೇಳಿದರು.

ಆದರೆ ನಡ್ಡಾ ಅವರು ಕೊಪ್ಪಳಕ್ಕೆ ಬರುತ್ತಿದ್ದಾರೆ. ಅವರ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಸಿಎಂ ಕೂಡಾ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳು ಇಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನು ಸೃಷ್ಟಿ ಮಾಡಲು ಹೋಗಬೇಡಿ ಎಂದು ಮನವಿ ಮಾಡಿದರು.