ನಮ್ಮ ಶಾಸಕರನ್ನು ಬಿಜೆಪಿಯವರು ಅಪಹರಿಸಿ ಮುಂಬೈ ಆಸ್ಪತ್ರೆಯಲ್ಲಿ ಬಲವಂತವಾಗಿ ದಾಖಲಿಸಿದ್ದಾರೆ : ಡಿ.ಕೆ ಶಿವಕುಮಾರ್…

240
firstsuddi

ಬೆಂಗಳೂರು : ಶಾಸಕ ಶ್ರೀಮಂತ್ ಪಾಟೀಲ್ ಅವರು ಎದೆ ನೋವಿನ ಹಿನ್ನೆಲೆ ಮುಂಬೈ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಈ ಕುರಿತು ಸದನದಲ್ಲಿ ಚರ್ಚಿಸಿದ ಡಿ.ಕೆ ಶಿವಕುಮಾರ್ ಅವರು ನಮ್ಮ ಶಾಸಕರನ್ನು ಬಿಜೆಪಿಯವರು ಅಪಹರಿಸಿ ಮುಂಬೈ ಆಸ್ಪತ್ರೆಯಲ್ಲಿ ಬಲವಂತವಾಗಿ ದಾಖಲಿಸಿದ್ದಾರೆ. ಶ್ರೀಮಂತ್ ಪಾಟೀಲ್ ಅವರನ್ನು ಬಿಜೆಪಿ ನಾಯಕರು ಮಾಜಿ ಶಾಸಕ ಲಕ್ಷ್ಮಣ್ ಸವಧಿ ಅವರ ಮೂಲಕ ಅಪಹರಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಆರೋಪ ಮಾಡಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಧ್ಯೆ ಪ್ರವೇಶಿಸಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಮಂತ್ ಪಾಟೀಲ್ ಅವರ ಫೋಟೋ ಹಾಗೂ ಇಂಡಿಗೋ ವಿಮಾನದಲ್ಲಿ ಶಾಸಕ ಶ್ರೀಮಂತ್ ಪಾಟೀಲ್ ಮತ್ತು ಬಿಜೆಪಿ ಮಾಜಿ ಶಾಸಕ ಲಕ್ಷ್ಮಣ್ ಸವಧಿ ಅವರು ಪ್ರಯಾಣಿಸಿದ ಟಿಕೆಟ್‍ನ ಪ್ರತಿಯನ್ನು ಸದನದಲ್ಲಿ ಪ್ರದರ್ಶಿಸಿದ್ದು, ಅಧಿಕಾರದ ಆಸೆಗಾಗಿ ನಮ್ಮ ಶಾಸಕರನ್ನು ಅಪಹರಿಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.