ನರೇಂದ್ರ ಮೋದಿ ಜೀ ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಮ್ಮಿ ಇಲ್ಲ : ಮೋದಿ ಅವರ ವಿರುದ್ಧ ನಟ ಜಗ್ಗೇಶ್ ಅಸಮಾಧಾನ…

273
firstsuddi

ಬೆಂಗಳೂರು : ಉತ್ತರ ಭಾರತದ ನಟ ನಟಿಯರಿಗಿಂತಲೂ ನಾವೇನು ಕಮ್ಮಿ ಇಲ್ಲ ಎಂದು ನವರಸ ನಾಯಕ ಜಗ್ಗೇಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತಮ್ಮ ಟ್ವಿಟರ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಹಿಂದಿ ಚಿತ್ರರಂಗದವರನ್ನು ಭೇಟಿಯಾಗಿ ಸಂವಾದ ಕಾರ್ಯಕ್ರಮ ನಡೆಸಿದ್ದ ವಿಚಾರವಾಗಿ ಪ್ರತಿಕ್ರಯಿಸಿರುವ ಜಗ್ಗೇಶ್ ಅವರು, “ಕನ್ನಡಿಗರು ಇಂದು ಬಹುತೇಕ ಪರಭಾಷೆಗಳ ಸ್ಟಾರ್ ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿತಪ್ಪಿದವರಂತೆ ಆಗಿದ್ದೇವೆ. ನರೇಂದ್ರ ಮೋದಿ ಜೀ ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಮ್ಮಿ ಇಲ್ಲ. ಕಲಾರಂಗಕ್ಕೆ ಶಾರೂಖ್, ಅಮೀರ್ ಒಡೆಯರಲ್ಲ. ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ. ನಿಮ್ಮ ಭಾವನೆ ಗೌರವಿಸುತ್ತೇನೆ ಜೈಹಿಂದ್ ಎಂದು ಟ್ವೀಟ್ ಮಾಡಿದ್ದು, ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಅವರು, ಇಂದು ಕರ್ನಾಟಕದಲ್ಲಿ ಹೆಚ್ಚು ತೆರಿಗೆ ಸಂಗ್ರಹ ಕನ್ನಡದ ನೆಲ ಚಿತ್ರರಂಗದಿಂದ ನಟರಿಂದ ಆಗುತ್ತಿದೆ ನೆನಪಿಡಿ. ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ರಾಷ್ಟ್ರಕ್ಕೆ ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ಎಂದು ಪ್ರಶ್ನಿಸಿದ್ದಾರೆ. ತುಂಬಾ ದುಃಖವಾಯಿತು ಖಾನ್ ಗಳಲ್ಲ ಚಿತ್ರರಂಗ ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.