ನರ್ಸ್ ಸೋಗಿನಲ್ಲಿ ಬಂದು ನವಜಾತ ಶಿಶು ಕಳ್ಳತನ…

56
firstsuddi

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನವಾಗಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ನವಜಾತ ಶಿಶುವೊಂದು ಜನಿಸಿತ್ತು. ಆದರೆ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನರ್ಸ್ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬಳು ಮಗುವಿನ ತೂಕ ಮಾಡಿಕೊಂಡು ಬರುವುದಾಗಿ ಹೇಳಿ, ನವಜಾತ ಶಿಶುವನ್ನು ತೆಗೆದುಕೊಂಡು ಹೋಗಿದ್ದಾಳಂತೆ.

ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಅಥಣಿ ಪೊಲೀಸರು ಮಗು ಕದ್ದ ಕಳ್ಳಿಯನ್ನು ಹಿಡಿಯಲು ಬಲೆಬೀಸಿದ್ದಾರೆ.