ನವೆಂಬರ್ 1ರಂದು ಪುನೀತ್‍ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ : ಸಿಎಂ.

73

ಬೆಂಗಳೂರು : ನವೆಂಬರ್ 1ರಂದು ನಟ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಅಪ್ಪುಗೆ ಘೋಷಣೆ ಮಾಡಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಮರಣೋತ್ತರವಾಗಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

1922 ರಿಂದ ಫಲಪುಷ್ಪ ಪ್ರದರ್ಶನ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವರ್ಷ ಅತಿ ಹೆಚ್ಚು ಜನರನ್ನು ಆಕರ್ಷಿಸುತ್ತಿದೆ. ಈ ಬಾರಿ ಸ್ವಾತಂತ್ರ್ಯೋತ್ಸವದ ಅಮೃತ ವರ್ಷಾಚರಣೆ ನಿಮಿತ್ತ ಸಂಭ್ರಮ ತುಂಬಿದೆ. ಮುಂದಿನ 10 ದಿನಗಳ ಕಾಲ ನಿತ್ಯ ಲಕ್ಷಾಂತರ ಜನ ಬರುವ ನಿರೀಕ್ಷೆ ಇದೆ ಎಂದರು.