ನಾಗಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ವಕ್ಕರಿಸಿದ ಕೊರೊನಾ…

86
firstsuddi

ಮಂಡ್ಯ : ನಾಗಮಂಗಲ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಒಂದು ವಾರಗಳ ಕಾಲ ಕಾಲೇಜನ್ನು ಸೀಲ್‍ಡೌನ್ ಮಾಡಲಾಗಿದೆ.

ಈ ಕಾಲೇಜಿನಲ್ಲಿ ಒಟ್ಟು 412 ಮಂದಿ ವಿದ್ಯಾರ್ಥಿನಿಯರಿದ್ದು, ಈ ಪೈಕಿ 372 ಮಂದಿಗೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ 19 ವಿದ್ಯಾರ್ಥಿನಿಯರಿಗೆ ಪಾಸಿಟಿವ್ ದೃಢಪಟ್ಟಿತ್ತು. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಹಲವು ಬಾಲಕಿಯರನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ ವೇಳೆ ಮತ್ತೆ 9 ವಿದ್ಯಾರ್ಥಿನಿಯರಿಗೆ ಪಾಸಿಟಿವ್ ದೃಢಪಟ್ಟಿದ್ದು, ಒಂದೇ ಕಾಲೇಜಿನ 28 ಮಂದಿಗೆ ಕೋವಿಡ್ ದೃಢಪಟ್ಟಿದೆ. ಕೋವಿಡ್ ಸೋಂಕಿತ ಬಾಲಕಿಯರಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.