ನಾಗಮಂಡಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ಅನುಮಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆಶೋಕ್.

28

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಡಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ. ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ನಾಗಮಂಗದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆಯನ್ನು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದು, ಈ ಕೋಮುದುಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ಬೈಕ್‍ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವುದು ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮುಂತಾದ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇದನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ” ಎಂದು ಎಕ್ಸ್ ಸಂದೇಶದಲ್ಲಿ ಅಶೋಕ್ ಉಲ್ಲೇಖಿಸಿದ್ದಾರೆ.
ಇಂತಹ ಘಟನೆಗಳು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕøತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟÀನೆಗಳ ದೊಡ್ಡ ಜಾಲವೇ ಇರುವಂತಿದೆ. ಕೂಡಲೇ ಈ ಪ್ರಕರಣಗಳನ್ನ ಎನ್‍ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.