ನವದೆಹಲಿ : ಚುನಾವಣಾ ಆಯೋಗವು ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ.
ತ್ರಿಪುರಾದಲ್ಲಿ ಫೆಬ್ರವರಿ 16ಕ್ಕೆ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ಫೆ.27ಕ್ಕೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರದಲ್ಲಿ ತಲಾ 60 ವಿಧಾನಸಭಾ ಕ್ಷೇತ್ರಗಳಿವೆ.
ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.










