ನಾಗ್ಪುರ- ಕೋಲ್ಕತ್ತಾ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ.

26

ನವದೆಹಲಿ: ಇತ್ತಿಚೇಗೆ ಭಾರತದ ವಿಮಾನಯಾನ ಸಂಸ್ಥೆಗಳಿಗೆ ಬಾಂಬೆ ಬೆದರಿಕೆ ಸಂದೇಶಗಳು ಹೆಚ್ಚುತ್ತಲೆ ಇವೆ. ಸರ್ಕಾರದ ಎಚ್ಚರಿಕೆ ನಡುವೆಯೂ ದೇಶದ ವಿಮಾನಯಾನ ಸಂಸ್ಥೆಗಳು ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಮುಂದುವರೆದಿದೆ. ಇಂದು ಬೆಳಗ್ಗೆ ನಾಗ್ಪುರ- ಕೋಲ್ಕತ್ತಾ ಮಾರ್ಗದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. 187 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯೊಂದಿಗೆ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದ ನಂತರ ರಾಯಪುರ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಲ್ಯಾಂಡಿಂಗ್ ಮಾಡಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ನಂತರ ವಿಮಾನವನ್ನು ಬೇರೆಡೆಗೆ ತಿರುಗಿಸಲಾಯಿತು ಎಂದು ರಾಯಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ಹೇಳಿದ್ದಾರೆ. ಛತ್ತೀಸ್‍ಗಢದ ರಾಜಧಾನಿ ರಾಯಪುರ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ವಿಮಾನವನ್ನು ಲ್ಯಾಡಿಂಗ್ ಮಾಡಲಾಯಿತು. ನಂತರ ಕಡ್ಡಾಯ ಭದ್ರತಾ ತಪಾಸಣೆಗಾಗಿ ಬೇರೆ ಕಡೆ ಕರೆದೊಯ್ಯಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.