ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಟ್ರಕ್‍ಗೆ ಬಸ್ ಡಿಕ್ಕಿ-7 ಮಂದಿ ಸಾವು…

46
firstsuddi

ಮುಂಬೈ: ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಟ್ರಕ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ ಘಟನೆ ಇಂದು ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ.

ಬಸ್ ಪುಣೆಯ ಮೆಹೆಕರ್​ನಿಂದ ಬರುತ್ತಿದ್ದು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತಿ ವೇಗದ ಪರಿಣಾಮ ಎರಡು ವಾಹನಗಳೂ ಸಂಪೂರ್ಣ ಜಖಂಗೊಂಡಿವೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡು ಹಲವರನ್ನು ಹೊರತೆಗೆದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.