ಬೆಂಗಳೂರು: ನಾಡಿನಾದ್ಯಂತ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಸಂಭ್ರಮ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.
ಮಕರ ಸಂಕ್ರಾಂತಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ತಮ್ಮ ನಿವಾಸದಲ್ಲಿ ಗೋವುಗಳಿಗೆ ಆಹಾರ ನೀಡಿದ್ದಾರೆ. ಹಬ್ಬದ ಶುಭಾಶಯಗಳನ್ನು ತಿಳಿಸಿದ ಮೋದಿಯವರು ಎಲ್ಲಾ ನಾಗರಿಕರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ನೆಮ್ಮದಿಯ ನಿರಂತರ ಹರಿವನ್ನು ಹಾರೈಸಿದರು.
ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಬ್ಬದ ಶುಭ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಅಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ರಾಜ್ಯದ ಗಣ್ಯಮಾನ್ಯರೂ ಹಬ್ಬಕ್ಕೆ ಶುಭಹಾರೈಸಿದ್ದಾರೆ.










