ಮುಂಬೈ : ನಾನು ನೀಡಿರುವ ಹೇಳಿಕೆ ತಪ್ಪು ಎಂದು ಸಾಬೀತಾದರೆ ಪದ್ಮಶ್ರೀ ಪ್ರಶಸ್ತಿಯನ್ನು ವಾಪಾಸ್ ನೀಡುತ್ತೇನೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದು 2014ರಲ್ಲಿ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಕಂಗನಾ ಹೇಳಿದ್ದರು. ಇವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು, ಕೇಂದ್ರ ಸರ್ಕಾರವು ನಟಿಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆಯಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.
ಇದೀಗ ತಮ್ಮ ವಿರುದ್ಧದ ಟೀಕೆಗಳಿಗೆ ಇನ್ ಸ್ಟಾಗ್ರಾಮ್ ಮೂಲಕ ತಿರುಗೇಟು ನೀಡಿರುವ ಕಂಗನಾ ನನ್ನ ತಪ್ಪು ಸಾಬೀತಾದರೆ ನನಗೆ ಕೊಟ್ಟಿರುವ ಪ್ರಶಸ್ತಿಯನ್ನು ಹಿಂದಿರುಗಿಸುತ್ತೇನೆ ಎಂದು ಹೇಳಿದ್ದಾರೆ.










