ಬೆಂಗಳೂರು : ಮಾಜಿ ಸಚಿವರ ರಾಸಲೀಲೆ ಸಿಡಿ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದ ಭವಿತ್ ಅವರು ಅಜ್ಞಾತ ಸ್ಥಳದಿಂದ ವೀಡಿಯೋ ಹೇಳಿಕೆ ನೀಡಿದ್ದು, ನನ್ನ ಹೆಸರು ಕೇಳಿಬಂದಿರುವುದು ಆಘಾತ ಉಂಟು ಮಾಡಿದೆ. ನಾನು ಪ್ರಕರಣದ ಸೂತ್ರದಾರನೂ ಅಲ್ಲ, ಭಾಗಿಯೂ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನನ್ನ ವಿರುದ್ಧ ಹರಿದಾಡುತ್ತಿರುವ ಆರೋಪಗಳು ಸುಳ್ಳು. ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದು ಹೋಗುತ್ತಿದ್ದೇನೆ ಪ್ರಕರಣದಲ್ಲಿ ನನ್ನ ಹೆಸರು ಕೇಳಿಬಂದಿರುವುದು ನನ್ನ ತೇಜೋವಧೆ ಆಗುತ್ತಿದೆ ಎಂದು ಹೇಳಿದ್ದಾರೆ.
ನನ್ನ ತಾಯಿ ಹಾರ್ಟ್ ಪೇಶೆಂಟ್, ಬೇಕಾದರೆ ನೀವೇ ನಮ್ಮ ಮನೆಗೆ ಹೋಗಿ ಬನ್ನಿ, ಆಗ ನನ್ನ ಪರಿಸ್ಥಿತಿ ನಿಮಗೆ ಅರ್ಥವಾಗುತ್ತದೆ. ಕುಟುಂಬದ ಗೌರವ ಹಾಳು ಮಾಡುವುದು ಎಷ್ಟು ಸರಿ? ಪ್ರಕರಣದಲ್ಲಿ ನನ್ನ ಪಾತ್ರ ಇದ್ದಿದ್ದರೆ ನಾನು ಒಪ್ಪಿಕೊಳ್ಳುತ್ತಿದ್ದೆ. ದಯವಿಟ್ಟು ನನ್ನನ್ನು ತಪ್ಪಿತಸ್ಥನಂತೆ ಮಾಧ್ಯಮದಲ್ಲಿ ಬಿಂಬಿಸಬೇಡಿ. ಎಂದು ವಿಡಿಯೋದಲ್ಲಿ ಭವಿತ್ ಅವರು ಮನವಿ ಮಾಡಿದ್ದಾರೆ.










