ನಾಮಪತ್ರ ಹಿಂಪಡೆಯುವ ಮಾತೇ ಇಲ್ಲ; ಸಿದ್ದರಾಮಯ್ಯ.

50
firssuddi

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ಮತದಾನ ನಡೆಯಲಿದ್ದು, ಈಗಾಗಲೇ ಆಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಕಾಂಗ್ರೆಸ್ ನಿಂದ 2ನೇ ಅಭ್ಯರ್ಥಿ ನಾಮಪತ್ರ ಹಿಂದಕ್ಕೆ ತೆಗೆಸೋ ಜೆಡಿಎಸ್ ಪ್ರಯತ್ನ ವಿಫಲವಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಕಾಂಗ್ರೆಸ್ 2ನೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆಯೋದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇಂದು ಚಿಂತನಾ ಶಿಬಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಏಕೆ ಎರಡನೇ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆಯಬೇಕು. ನಾವು ಗೆಲ್ಲುವ ವಿಶ್ವಾಸದಿಂದಲೇ 2ನೇ ಅಭ್ಯರ್ಥಿಯನ್ನ ಕಣಕ್ಕಿಳಿಸಿರುವುದು. ಹೀಗಾಗಿ ನಾವು ಯಾವ ಕಾರಣಕ್ಕೂ ನಾಮಪತ್ರ ಹಿಂಪಡೆಯೋದಿಲ್ಲ ಎಂದು ಹೇಳಿದ್ದಾರೆ.

ನಾವು ಆತ್ಮ ಸಾಕ್ಷಿಗೆ ಮತಹಾಕಲು ಕೇಳಿದ್ದೇವೆ. ನಮಗೆ ಬೇರೆಯವರು ಕೂಡ ಆತ್ಮಸಾಕ್ಷಿಯ ಮತ ಹಾಕ್ತಾರೆ. ಯಾರು ಮತ ಹಾಕ್ತಾರೆ ಅಂತಾ ಹೇಳೋಲ್ಲ. ಎರಡನೇ ಪ್ರಾಶಸ್ತ್ಯದ 72 ಮತಗಳು ನಮಗಿದೆ. ಹೈಕಮಾಂಡ್ ಸೂಚನೆ ಮೇರೆಗೆ ನಾವು ಮನ್ಸೂರ್ ಅಲಿ ಖಾನ್ ಕಣಕ್ಕಿಳಿಸಿದ್ದೇವೆ. ನಾವು ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಅವರೂ ಅವರ ಪಕ್ಷದ ಅಭ್ಯರ್ಥಿಯನ್ನು ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.