ಮಹಾರಾಷ್ಟ್ರ : ನಾಲ್ಕು ಅಂತಸ್ಥಿನ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಭಿವಾಂಡಿ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.










