ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ…

77
firstsuddi

ಶಿವಮೊಗ್ಗ : ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಿದ್ಯಾ(32) ಹಾಗೂ ತನ್ವಿ(4) ಮೃತ ದುರ್ದೈವಿಗಳು. ಮನೆಯ ಹಿಂಬದಿ ಇರುವ 50 ಅಡಿ ಆಳದ ಬಾವಿಗೆ ಹಾರಿ ಇಂದು ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಹೊಸನಗರ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಯಿಂದ ತಾಯಿ – ಮಗಳ ಮೃತದೇಹ ಹೊರತೆಗೆದಿದ್ದಾರೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ.

ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.