ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಕಿಚ್ಚ ಸುದೀಪ್…

195
firstsuddi

ಬೆಂಗಳೂರು : ಇತ್ತೀಚೆಗೆ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವರು ಈಗಾ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಿಚ್ಚ ಚ್ಯಾರಿಟೇಬಲ್ ಸೊಸೈಟಿಯಿಂದ ಚಿತ್ರದುರ್ಗದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆ. ಕಿಚ್ಚ ಚ್ಯಾರಿಟೇಬಲ್ ಸೊಸೈಟಿ ಸರ್ಕಾರಿ ಶಾಲೆಗಳ ಗುಣಮಟ್ಟ ಹಾಗೂ ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಿದ್ದು, ಹೀಗಾಗಿ ಮೊದಲನೆಯದಾಗಿ 4 ಶಾಲೆಗಳನ್ನು ದತ್ತು ಪಡೆದಿದೆ. ಅಲ್ಲದೇ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಕಿಚ್ಚ ಫೌಂಡೇಷನ್ ವತಿಯಿಂದ ನೀಡಲಾಗುತ್ತದೆ. ಶಾಲಾ ಮಕ್ಕಳಿಗೆ ವಿದ್ಯಾರ್ಥಿವೇತನ ಹಾಗೂ ಕಂಪ್ಯೂಟರ್ ನೀಡುವುದು ಹೀಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.