ನಾಲ್ವಾರು ಯುವಕರಿಂದ ಯುವತಿಯ ಮೇಲೆ ಗ್ಯಾಂಗ್ ರೇಪ್.

53

ಬೆಂಗಳೂರು: ಪರಿಚಯಸ್ಥ ಮಹಿಳೆಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಗರದ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿಯಿರುವ ಖಾಸಗಿ ಹೋಟೆಲ್‍ನ ಟೆರೆಸ್ ಮೇಲೆ ಕಾಮುಕರು ಪರಿಚಯಸ್ಥ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಸಂತ್ರಸ್ತ ಮಹಿಳೆ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಪ್ರಕರಣ ಕುರಿತಂತೆ ಕೋರಮಂಗಲ ಪೊಲೀಸರು ಸದ್ಯ ಮೂವರನ್ನು ಬಂಧಿಸಿದ್ದಾರೆ.