ಚಿಕ್ಕಬಳ್ಳಾಪುರ : ನಾಳೆಯಿಂದ ನಂದಿಬೆಟ್ಟ ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾಗಲಿದೆ.
ಹೆಚ್ಚಿನ ಮಳೆಯಿಂದಾಗಿ ಆಗಸ್ಟ್ ತಿಂಗಳಲ್ಲಿ ನಂದಿ ಗಿರಿಧಾಮದ ರಸ್ತೆ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿತ್ತು. ಸದ್ಯ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ನಂದಿಬೆಟ್ಟಕ್ಕೆ ನಾಳೆಯಿಂದ ಪ್ರವಾಸಿಗರ ಪ್ರವೇಶಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅನುಮತಿ ನೀಡಿದೆ.
ನಾಳೆಯಿಂದ ವೀಕ್ ಡೇಸ್ ನಲ್ಲಿ ಮಾತ್ರ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ಇದೆ. ಆದರೆ, ವಾರಾಂತ್ಯದ ಶನಿವಾರ ಮತ್ತು ಭಾನುವಾರದ ದಿನಗಳಂದು ಮಾತ್ರ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸ್ವಚ್ಛತೆ ಕಾಪಾಡುವ ಮೂಲಕ ಗಿರಿಧಾಮದ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಜೊತೆಗೆ ಕೋವಿಡ್ -19 ರ ನಿಯಂತ್ರಣದ ಸರ್ಕಾರದ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.










