ಬೆಂಗಳೂರು : ರಾಜ್ಯದಲ್ಲಿ 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ.
ಕೋವಿಡ್ ಕಾರಣದಿಂದಾಗಿ ಎರಡು ವರ್ಷದಿಂದ ತರಗತಿಗಳು ನಡೆದಿರಲಿಲ್ಲ. ಇದೀಗ ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇನ್ನೂ ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ಈ ವರ್ಷ ಸರ್ಕಾರ ಎಚ್ಚೆತ್ತುಕೊಂಡಿದೆ. ಹೈಕೋರ್ಟ್ ತೀರ್ಪಿನ ಅನ್ವಯ ಸಮವಸ್ತ್ರ ಧರಿಸುವಂತೆ ಆದೇಶ ಹೊರಡಿಸಿದೆ. ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು. ಒಂದು ವೇಳೆ ಸಮವಸ್ತ್ರ ನಿಯಮ ಇಲ್ಲದೆ ಹೋದರೆ ಧಾರ್ಮಿಕ ಭಾವನೆಗೆ ಧಕ್ಕೆ ಆಗದಂತಹ ವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.










