ಬೆಂಗಳೂರು: 7ನೇ ವೇತನ ಆಯೋಗ ಜಾರಿ, ನೂತನ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದು ಹಾಗೂ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಕಳೆದ ಕೆಲವು ತಿಂಗಳಿನಿಂದ 7ನೇ ವೇತನ ಆಯೋಗ ಜಾರಿ ಹಾಗೂ ಎನ್ಪಿಎಸ್ ರದ್ದು ಮಾಡುವಂತೆ ಆಗ್ರಹಿಸಿ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದಾರೆ. ಇದೀಗ ಈ ಪ್ರತಿಭಟನೆಯನ್ನು ತೀವ್ರವಾಗಿ ನಡೆಸಲು ನಾಳೆ ನಿರ್ಧರಿಸಿದ್ದಾರೆ. ಆದರೆ ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದರೇ ಮಾತ್ರ ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದಾರೆ.
ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ (ಐಸಿಯು, ಎಂಐಸಿಯು ಹೊರತುಪಡಿಸಿ), ಕಂದಾಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್ ಗಳು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಲಮಂಡಳಿ, ಬಿಬಿಎಂಪಿ ಆಸ್ಪತ್ರೆಗಳು, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಇರಲಿವೆ.










